ಅಭಿಪ್ರಾಯ / ಸಲಹೆಗಳು

ಮಟ್ಕಾ ಜೂಜಾಟ ದಾಳಿ.

ದಿನಾಂಕ: 06-02-2021 ರಂದು ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ನವಲಿ ಗ್ರಾಮದ ಆದಾಪುರ ವೃತ್ತದಲ್ಲಿ 1] ದೇವರಾಜ ಕಂಪ್ಲಿ 2] ಬಸಪ್ಪ ತಂದೆ ದುರುಗಪ್ಪ ತಳವಾರ ಮತ್ತು 3] ಭೋಗೇಶ ತಂದೆ ದುರುಗಪ್ಪ ತಳವಾರ ಸಾ. ಸಂಕನಾಳ 3 ಜನ ಆರೋಪಿತರು ಕೂಡಿಕೊಂಡು ಸಾರ್ವಜನಿಕರಿಗೆ ಕರೆದು ಹಣ ಪಡೆದುಕೊಂಡು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ್ಗೆ ಶ್ರೀ ಉದಯರವಿ ಸಿ.ಪಿ.ಐ. ಗಂಗಾವತಿ ಗ್ರಾಮೀಣ ವೃತ್ತರವರು ಸಿಬ್ಬಂದಿ ಹಾಗೂ ಪಂಚರ ಸಮಕ್ಷಮದಲ್ಲಿ ಹೋಗಿ ದಾಳಿ ಮಾಡಿ ನಗದು ಹಣ ರೂ.1050/-, ಮಟ್ಕಾ ನಂಬರ್ ಬರೆದ ಒಂದು ಪಟ್ಟಿ, ಒಂದು ಬಾಲ್ ಪೆನ್ನು ಪಂಚರ ಸಮಕ್ಷಮದಲ್ಲಿ ಜಪ್ತಿ ಮಾಡಿಕೊಂಡು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿರುತ್ತಾರೆ.

 

ಇಸ್ಪೇಟ್ ಜೂಜಾಟ ದಾಳಿ.

ದಿನಾಂಕ: 06-02-2021 ರಂದು ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈಲಾಪೂರ ಗ್ರಾಮದ 32 ನೇ ಉಪಕಾಲುವೆ ಪಕ್ಕದಲ್ಲಿ ಸಾರ್ವಜನಿಕ ಸ್ಥಳದಲ್ಲಿ 4 ಜನ ಆರೋಪಿತರು ದುಂಡಾಗಿ ಕುಳಿತುಕೊಂಡು ಹಣವನ್ನು ಪಣಕ್ಕೆ ಹಚ್ಚಿ ಅಂದರ್ ಬಾಹರ್ ಎನ್ನುವ ಇಸ್ಪೀಟ್ ಜೂಜಾಟದಲ್ಲಿ ತೋಡಗಿದ್ದಾಗ ಶ್ರೀ ಲಕ್ಕಪ್ಪ ಬಿ. ಅಗ್ನಿ ಪಿ.ಎಸ್.ಐ. ಕಾರಟಗಿ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟದ ನಗದು ಹಣ ರೂ. 480=00 ಗಳನ್ನು ಮತ್ತು ಇಸ್ಪೀಟ್ ಜೂಜಾಟದ ಸಾಮಾಗ್ರಿಗಳನ್ನು ಪಂಚರ ಸಮಕ್ಷಮ ಜಪ್ತಿ ಮಾಡಿಕೊಂಡಿದ್ದು, ಸಿಕ್ಕ 04 ಜನ ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇತ್ತೀಚಿನ ನವೀಕರಣ​ : 07-02-2021 12:00 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080