ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ದಾಳಿ

ದಿನಾಂಕ 19-07-2021 ರಂದು ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಸರಹಳ್ಳಿ ಗ್ರಾಮದ ಬಸ್ಸ್ ನಿಲ್ಧಾಣ ಹತ್ತಿರ ರಸ್ತೆ ಪಕ್ಕ ಪಾನ್ ಶಾಪ್ ಅಂಗಡಿ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಯಂಕನಗೌಡ ತಂದೆ ಹನಮನಗೌಡ ಗೊಡಚಳ್ಳಿ ಸಾ: ಬಿಸರಳ್ಳಿ ಇತನು ಸರಕಾರದ ಯಾವುದೇ ಪರವಾನಿಗೆ ಪಡೆಯದೆ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾಗ ಶ್ರೀ ಬಸವರಾಜ ಎ.ಎಸ್.ಐ. ಅಳವಂಡಿ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಅ.ಕಿ ರೂ 3741-00 ಮೌಲ್ಯದ ವಿವಿಧ ರೀತಿಯ ಬಾಟಲಿಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ದಿನಾಂಕ: 19-07-2021 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ತಾಳಕನಕಾಪುರ ರಸ್ತೆಯ ಶಿಪ್ಟಿಂಗ್ ಏರಿಯಾದ ಸುನೀಲ ಡಾಬಾದ ಮುಂದೆ  ಸಾರ್ವಜನಿಕ ಸ್ಥಳದಲ್ಲಿ  ಮಂಜುನಾಥ ತಂದೆ ನಾಗಪ್ಪ ನೇಲಜೇರಿ ಸಾ: ಇಲಕಲ್ಗಡ ತಾ:ಜಿ:ಕೊಪ್ಪಳ ಇತನು ಯಾವುದೇ ಅನುಮತಿಯನ್ನು ಪಡೆಯದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಶ್ರೀ ಲಕ್ಕಪ್ಪ ಅಗ್ನಿ ಪಿ.ಎಸ್.ಐ ಕೊಪ್ಪಳ ಪೊಲೀಸ ಠಾಣೆರವರು ಸಿಬ್ಬಂದಿ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಅಂ.ಕಿ. 2459-00 ರೂ. ಮೌಲ್ಯದ ಮದ್ಯದ ಬಾಟಲಿಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ದಿನಾಂಕ: 19-07-2021 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಹಲಗೇರಿ ಗ್ರಾಮದ ಕೊಪ್ಪಳ ಎನ,ಹೆಚ್-63 ರಸ್ತೆ ಕಾವೇರಿ ಪೆಟ್ರೊಲ್ ಬಂಕ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಂಜುನಾಥ ತೋಟದ ಸಾ: ಬಾನಾಪೂರ ಎಂಬುವವನು ಯಾವುದೇ ಅನುಮತಿಯನ್ನು ಪಡೆಯದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಶ್ರೀ ಲಕ್ಕಪ್ಪ ಅಗ್ನಿ ಪಿ.ಎಸ್.ಐ ಕೊಪ್ಪಳ ಪೊಲೀಸ ಠಾಣೆರವರು ಸಿಬ್ಬಂದಿ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಅಂ.ಕಿ. 1756-00 ರೂ. ಮೌಲ್ಯದ ಮದ್ಯದ ಬಾಟಲಿಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಇಸ್ಪೇಟ್ ಜೂಜಾಟ ದಾಳಿ

ದಿನಾಂಕ:19-07-2021 ರಂದು ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿರ್ಚಿನಗುಡ್ಡ ತಾಂಡಾದ ಸೀಮಾದಲ್ಲಿರುವ ಆಂಜನೇಯ ಬೆಟ್ಟದ ಹತ್ತಿರ  ಸಾರ್ವಜನಿಕ ಸ್ಥಳದಲ್ಲಿ 7 ಜನ ಆರೋಪಿತರು ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ತಾರಾಬಾಯಿ ಪಿ.ಎಸ್.ಐ. ಕನಕಗಿರಿ ಪೊಲೀಸ್ ಠಾಣೆರವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತರಿಂದ ನಗದು ಹಣ ರೂ. 5,300=00 ಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಇತ್ತೀಚಿನ ನವೀಕರಣ​ : 20-07-2021 12:52 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಪ್ಪಳ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080